Tuesday, July 15, 2025

ಸತ್ಯ | ನ್ಯಾಯ |ಧರ್ಮ

ಸಿಗಂದೂರು ಸೇತುವೆ ಉದ್ಘಾಟನೆ ; ಶಿಷ್ಟಾಚಾರ ಉಲ್ಲಂಘನೆಯ ಆರೋಪ : ಸಿಎಂ ಇಂದ ಪ್ರಧಾನಿಗೆ ಪತ್ರ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ, ಕಾರ್ಯಕ್ರಮ ಮುಂದೂಡಬೇಕು ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದ ಬೆನ್ನಲ್ಲೇ ನಿತಿನ್ ಗಡ್ಕರಿ ವಿರುದ್ಧ ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ನಿಜವಾದ ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ಮಹತ್ವದ ಸಾರ್ವಜನಿಕ ಕಾರ್ಯಕ್ರಮಗಳನ್ನು ಅಂತಿಮಗೊಳಿಸುವ ಮೊದಲು, ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣವಾಗಿ ಚರ್ಚಿಸಿ ಅಂತಿಮಗೊಳಿಸಬೇಕು’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದ ಭಾಗವಾಗಿ ಪಾಠ ಮಾಡಿದ್ದರು. ಆದರೂ ಕೇಳದೇ ಸೇತುವೆ ಉದ್ಘಾಟಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ಅವರಿಗೆ ಪತ್ರ ಬರೆದಿರುವ ಅವರು, ಕಾರ್ಯಕ್ರಮಕ್ಕೆ ತ್ವರಿತವಾಗಿ ಆಹ್ವಾನಿಸಿದ್ದು ಒಂದೆಡೆಯಾದರೆ, ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಲಾಗಿತ್ತು. ಆದರೆ ಸ್ಥಳೀಯ ಬಿಜೆಪಿ ನಾಯಕರ ರಾಜಕೀಯ ಒತ್ತಡದಿಂದ ತರಾತುರಿಯಾಗಿ ಸೇತುವೆ ಲೋಕಾರ್ಪಣೆಗೊಳಿಸಲಾಗಿದೆ.

ಇನ್ನು ರಾಜ್ಯ ಸರ್ಕಾರಕ್ಕೆ ಸಮಪರ್ಪಕವಾಗಿ ಸಂಪರ್ಕಿಸದೇ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಆಹ್ವಾನದ ಪತ್ರಿಕೆಯಲ್ಲಿ ಸಭಾಪತಿ, ಉಪಮುಖ್ಯಮಂತ್ರಿಯವರ, ರಾಜ್ಯಪಾಲರ ಹೆಸರು ಹೀಗೆ ಹಲವು ಸಂಗತಿಗಳು ಮೊದಲು ಉಲ್ಲೇಖಿಸಬೇಕಿತ್ತು. ಆದರೆ ಮಾಜಿ ಸಿಎಂ ಅವರ ಹೆಸರನ್ನು ಮುದ್ರಿಸಿ ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲ ಅವಮಾನಿಸದಂತೆ. ಈ ನಡೆ ಒಪ್ಪುವಂತದ್ದಲ್ಲ.

ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನ ಹೇಳುವ ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಿಎಂ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ಈ ರೀತಿಯ ಶಿಷ್ಟಾಚಾರವನ್ನು ಉಲ್ಲಂಘನೆ ಮುಂದಿನ ದಿನಗಳಲ್ಲಿ ಆಗದಿರಲಿ. ಆ ನಿಟ್ಟಿನಲ್ಲಿ ಕೇಂದ್ರ ಸಚಿವರುಗಳು ಪಾಲಿಸುವಂತೆ ಕಿವಿಮಾತು ಹೇಳಿ ಎಂದೂ ಆಗ್ರಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page