ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yeddyurappa) ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ (Pocso Case) ಬಿಗ್ ರಿಲೀಫ್ ಸಿಕ್ಕಿದೆ.ಪೋಕ್ಸೋ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು ಮತ್ತು ಅಷ್ಟೇ ಅಲ್ಲದೆ ಬಿಎಸ್ ವೈ ಅವರನ್ನು ಖುದ್ದಾಗಿ ಹಾಜರಾಗುವಂತೆ ಆದೇಶಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ಯಡಿಯೂರಪ್ಪ ಅವರಿಗೆ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದೆ.
ಈ ನಡುವೆ, ಬೆಂಗಳೂರಿನ ಕೋರ್ಟ್‌ನಲ್ಲೂ ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಈ ವೇಳೆ, ಯಡಿಯೂರಪ್ಪ ಪರ ವಕೀಲರು ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ತಡೆ ಆದೇಶದ ದಾಖಲೆಯನ್ನು ನೀಡಲು ನ್ಯಾಯಾಧೀಶರು ಸೂಚಿಸಿದ್ದು, ಇದೀಗಷ್ಟೇ ಮಾಹಿತಿ ಸಿಕ್ಕಿದೆ, ದಾಖಲೆಗಳನ್ನು ತಕ್ಷಣ ಸಲ್ಲಿಸುತ್ತೇವೆ ಎಂದು ಯಡಿಯೂರಪ್ಪ ಪರ ವಕೀಲರು ತಿಳಿಸಿದ್ದಾರೆ. ಪ್ರಕರಣದ ವಿಚಾರಣೆ ಮೊದಲ ಫಾಸ್ಟ್ ಟ್ರಾಕ್ ಕೋರ್ಟ್‌ನಲ್ಲಿ ನಡೆಯುತ್ತಿದೆ.
