Friday, March 14, 2025

ಸತ್ಯ | ನ್ಯಾಯ |ಧರ್ಮ

ಉತ್ತರ ಪ್ರದೇಶಕ್ಕೂ ಕಾಲಿಟ್ಟ ಕರ್ನಾಟಕದ “ನಂದಿನಿ” ; ಹತ್ರಾಸ್ ನಲ್ಲಿ ಕೋ-ಪ್ಯಾಕಿಂಗ್ ಮತ್ತು ಮಾರಾಟ ಶುರು

ಕುಂಭಮೇಳದಲ್ಲಿ 10 ಚಾಯ್ ಪಾಯಿಂಟ್ ಗಳ ತೆರೆಯುವುದರ ಮೂಲಕ ಉತ್ತರ ಪ್ರದೇಶದಲ್ಲಿ ಪ್ರಾಯೋಗಿಕ ಮಾರಾಟಕ್ಕೆ ಇಳಿದಿದ್ದ ಕರ್ನಾಟಕ ರಾಜ್ಯದ ಕೆಎಂಎಫ್ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಂದಿನಿ ಹಾಲಿನ ಕೋ-ಪ್ಯಾಕಿಂಗ್ ಮತ್ತು ಮಾರಾಟವನ್ನು ಪ್ರಾರಂಭಿಸಲಾಗಿದೆ.

ಉತ್ತರಪ್ರದೇಶ ರಾಜ್ಯದ “ಹತ್ರಾಸ್” ಜಿಲ್ಲೆಯಲ್ಲಿ ನೂತನ ಹಾಲು ಸಂಸ್ಕರಣಾ ಘಟಕವನ್ನು ಗುರುತಿಸಲಾಗಿದ್ದು, ಸದರಿ ಘಟಕದ ಸುತ್ತಮುತ್ತಲಿನ ನಗರಪ್ರದೇಶಗಳಾದ ಆಗ್ರಾ, ಮಥುರ, ಮೀರತ್, ಅಲಿಗರ್‌ (Mathura, Agra, Meerut, Alighar) ಪ್ರದೇಶಗಳಲ್ಲಿ ನಂದಿನಿ ಹಾಲು ಮಾರಾಟವನ್ನು ಪ್ರಾರಂಭಿಸುವ ಸಂಬಂಧ ಅಲ್ಲಿನ ಮಾರಾಟಗಾರರ ಸಭೆಯನ್ನು ದಿನಾಂಕ 05.03.2025 ರಂದು ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಶಿವಸ್ವಾಮಿ ಕೆ.ಎ.ಎಸ್ ರವರು ನೇರವೇರಿಸಿ, ಸದರಿ ಪ್ರದೇಶಗಳಲ್ಲಿ ದಿನಾಂಕ: 16.03.2025 ರಿಂದ ನಂದಿನಿ ಹಾಲು ಮತ್ತು ಮೊಸರು ಮಾರಾಟಕ್ಕೆ ಎಲ್ಲಾ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಜೊತೆಗೆ ರಾಜಸ್ಥಾನದ ಜೈಪುರ್‌ನಲ್ಲಿ ಸಹ ಈ ಮಾಹೆಯಲ್ಲಿಯೇ ಹಾಲು ಮಾರಾಟ ಪ್ರಾರಂಭಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.

ಹೈನೋದ್ಯಮದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ “ನಂದಿನಿ” ಬ್ರಾಂಡ್‌ ಉತ್ಪನ್ನಗಳ ಮಾರಾಟವನ್ನು ಕರ್ನಾಟಕ ರಾಜ್ಯಕ್ಕೆ ಮಾತ್ರ ಸಿಮೀತಗೊಳಿಸದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲಿಯೂ ಸಹ ಮಾರಾಟ ಜಾಲ ವಿಸ್ತರಣೆಯನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದೆ.

ಇದೇ ನಿಟ್ಟಿನಲ್ಲಿ ಇತ್ತೀಚಿಗಷ್ಟೇ ಕೆಎಂಎಫ್ ಸಂಸ್ಥೆಯು ರಾಷ್ಟ್ರ ರಾಜಧಾನಿ ‘ದೆಹಲಿ’ ಮಾರುಕಟ್ಟೆಯಲ್ಲಿ ನಂದಿನಿ ಸ್ಯಾಚೆ ಹಾಲು, ಮೊಸರು ಮತ್ತು ಮಜ್ಜಿಗೆ ಮಾರಾಟ ಪ್ರಾರಂಭಿಸಿದ್ದು, ಸದರಿ ಮಾರುಕಟ್ಟೆ ಪ್ರದೇಶಗಳ ಸುತ್ತಮುತ್ತಲಿನ ನಗರಗಳಿಗೆ ಮಾರಾಟ ಜಾಲ ವಿಸ್ತರಣೆಗೆ ಕಾರ್ಯಚಟುವಟಿಕೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page