Sunday, July 27, 2025

ಸತ್ಯ | ನ್ಯಾಯ |ಧರ್ಮ

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಕೇಜ್ರಿವಾಲ್ ವಿರುದ್ದ ಸಮನ್ಸ್‌ ವಜಾಗೊಳಿಸಿದ ಹೈಕೋರ್ಟ್

ಪಣಜಿ: ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ ಕೇಜ್ರಿವಾಲ್ ವಿರುದ್ಧ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಸಮನ್ಸ್ ಹೊರಡಿಸಿದ್ದ ಮ್ಯಾಜಿಸ್ಟ್ರೇಟ್‌ ಆದೇಶವನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಮಂಗಳವಾರ ವಜಾಗೊಳಿಸಿತು.


2017ರಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲಾಗಿದ್ದರಿಂದ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ಪಕ್ಷದ ಗೋವಾ ವಿಭಾಗದ ಮುಖ್ಯಸ್ಥ ಅಮಿತ್ ಪಾಲೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಜ್ರಿವಾಲ್ ವಿರುದ್ಧ ಸಲ್ಲಿಕೆಯಾಗಿದ್ದ ಆರೋಪಪಟ್ಟಿ ಪರಿಗಣಿಸಿ ಜೆಎಂಎಫ್‌ಸಿ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಅವರು ಪ್ರಜಾಪ್ರತಿನಿಧಿ ಕಾಯ್ದೆಯಡಿ ಸಮನ್ಸ್ ಜಾರಿಗೊಳಿಸಿದ್ದರು. ಇದರಲ್ಲಿ ಲಂಚದ ಆರೋಪ ಸಹ ಮಾಡಲಾಗಿತ್ತು.


‘ಕಳೆದ ನವೆಂಬರ್‌ನಲ್ಲಿ ಸಮನ್ಸ್‌ ಜಾರಿಗೊಳಿಸಿದಾಗ ಕೇಜ್ರಿವಾಲ್‌ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಜತೆಗೆ ಸಮನ್ಸ್ ಕುರಿತು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿದ್ದರು. ಇದೇ ಪ್ರಕರಣದ ವಿಚಾರಣೆ ಫೆ. 12ರಂದು ಮ್ಯಾಜಿಸ್ಟ್ರೇಟ್ ಎದುರು ಬರಲಿದೆ’ ಎಂದು ಪಾಲೇಕರ್‌ ತಿಳಿಸಿದ್ದಾರೆ. 2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಯಾವುದೇ ಖಾತೆ ತೆರೆದಿರಲಿಲ್ಲ. 2022ರ ಚುನಾವಣೆಯಲ್ಲಿ ಪಕ್ಷವು 2 ಸ್ಥಾನಗಳಲ್ಲಿ ಜಯ ಪಡೆದಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page