ಭಾರತದ ಜನಪ್ರಿಯ ಹಾಸ್ಯನಟ ಕಪಿಲ್ ಶರ್ಮಾ ಅವರ ಮೇಲೆ ಕೆನಡಾದಲ್ಲಿ ಗುಂಡಿನ ದಾಳಿಯಾಗಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಹೊಸದಾಗಿ ತೆರೆಯಲಾದ ರೆಸ್ಟೋರೆಂಟ್ KAP’S CAFE ನಲ್ಲಿ ಈ ದಾಳಿ ನಡೆದಿದೆ. ಇಲ್ಲಿಯವರೆಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.
ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಗೆ ಸಂಬಂಧಿಸಿದ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಪಟ್ಟಿ ಮಾಡಲಾದ ಹರ್ಜಿತ್ ಸಿಂಗ್ ಲಡ್ಡಿ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಘಟನೆ ಬಗ್ಗೆ ಕೆನಡಾದ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಹಾಗೇ ಭಾರತೀಯ ಏಜೆನ್ಸಿಗಳು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ಬೆದರಿಕೆಯ ಹಿನ್ನೆಲೆಯಲ್ಲಿ ಶರ್ಮಾ ಅವರ ಆಸ್ತಿಗಳ ಸುತ್ತಲಿನ ಭದ್ರತೆ ಮತ್ತು ಸಾರ್ವಜನಿಕ ಹಾಜರಾತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ.