ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರ ಭೀಮ ಸ್ಥಳೀಯವಾಗಿ ನನಗೆ ಭದ್ರತೆ ಇಲ್ಲ. ಹೀಗಾಗಿ ನನಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಯಾವ ಸಮಯದಲ್ಲಿ ನನ್ನ ಮೇಲೆ ಆಕ್ರಮಣ ಆಗಬಹುದೋ ಗೊತ್ತಿಲ್ಲ. ಹೀಗಾಗಿ ನನಗೆ ಗನ್ ಮ್ಯಾನ್ ಅಗತ್ಯವಿದೆ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರರಿಗೆ ಈ ವಿಶೇಷ ಮನವಿ ಬಂದಿದೆ. ನನ್ನ ಮೇಲೂ ದಾಳಿ ನಡೆಸುವ ಸಾಧ್ಯತೆಯಿದೆ ಗನ್ಮ್ಯಾನ್ ನೀಡಬೇಕೆಂದು ಮನವಿ ಮಾಡಿದ್ದಾನೆ. ಗುರುವಾರದ ವಿಚಾರಣೆಯ ಸಂದರ್ಭದಲ್ಲಿ ದೂರುದಾರನ ಪರ ವಕೀಲರು ವಿಶೇಷ ತನಿಖಾ ತಂಡಕ್ಕೆ (SIT) ಗನ್ ಮ್ಯಾನ್ ನೀಡಬೇಕೆಂದು ಲಿಖಿತ ಮನವಿ ಮಾಡಿದ್ದಾರೆ.
ಈ ಬೆಳವಣಿಗೆ ಬೆನ್ನಲ್ಲೇ ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳಿರುವ ಕಛೇರಿಗೆ ವಕೀಲರ ಜೊತೆಗೆ ದೂರುದಾರ ಆಗಮಿಸಿದ್ದಾರೆ. ದೂರುದಾರ ಆಗಮಿಸಿದ ಖಾಸಗಿ ಕಾರಿನ ಮುಂದೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಪೊಲೀಸ್ ವಾಹನದಲ್ಲಿದ್ದ ಚಾಲಕ ಸಹಿತ ಇಬ್ಬರು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.