Friday, April 26, 2024

ಸತ್ಯ | ನ್ಯಾಯ |ಧರ್ಮ

ಸುಳ್ಳು ಚುನಾವಣಾ ಅಫಿಡವಿಟ್: ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂ ನಿವಾಸಿ ಶ್ರೀನಿವಾಸ ಎಂಬುವರು ಈ ಸಂಬಂಧ ದೂರು ದಾಖಲಿಸಿದ್ದಾರೆ.

ದೂರುದಾರರ ಪ್ರಕಾರ, ಶಾಸಕರು ಅವರ ಪತ್ನಿ ಕಲ್ಪನಾ ಸೈಲ್ ಮತ್ತು ಅವರ ಹೆಸರಿನಲ್ಲಿರುವ ಮಾಹಿತಿಯನ್ನುಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕುರಿತು ಚುನಾವಣಾ ಅಫಿಡವಿಟ್ಟಿನಲ್ಲಿ ನಮೂದಿಸಿಲ್ಲ. ಅಲ್ಲದೆ, ಅಫಿಡವಿಟ್‌ನಲ್ಲಿ ಕಂಪನಿಯ ಬ್ಯಾಂಕ್ ವಹಿವಾಟುಗಳನ್ನು ನಮೂದಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನಿವೇಶನವನ್ನು ಒತ್ತೆ ಇಟ್ಟು ಶಾಸಕ ಸೈಲ್ ಅವರು 63,90,19,813 ರೂಪಾಯಿ ಸಾಲ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ನಿರ್ದಿಷ್ಟ ಉದ್ದೇಶಕ್ಕಾಗಿ 30 ವರ್ಷಗಳ ಕಾಲ ಮಂಜೂರು ಮಾಡಿದ ಭೂಮಿಯನ್ನು ಒತ್ತೆ ಇಡುವುದು ಕಾನೂನಿಗೆ ವಿರುದ್ಧವಾದುದು ಎಂದು ದೂರುದಾರರು ಆರೋಪಿಸಿದ್ದಾರೆ. ಅಫಿಡವಿಟ್‌ನಲ್ಲಿ ಸಾಲದ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಲಾಗಿಲ್ಲ ಮತ್ತು ಉಳಿತಾಯ ಖಾತೆಯ ವಿವರಗಳನ್ನು ಮಾತ್ರ ನೀಡಲಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ಮಾಜಿ ಪ್ರಧಾನಿ ಹೆಚ್ ಡಿ ಮೊಮ್ಮಗ, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ನಂತರ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮತದಾರರಿಗೆ ಕುಕ್ಕರ್ ಹಂಚುವ ಮೂಲಕ ಚುನಾವಣಾ ಅವ್ಯವಹಾರ ನಡೆಸಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ದೂರು ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು