Wednesday, July 2, 2025

ಸತ್ಯ | ನ್ಯಾಯ |ಧರ್ಮ

JDS-BJP ಪಾಳಯದಿಂದ ಮುಖ್ಯಮಂತ್ರಿ ಹೆಸರಿನಲ್ಲಿ ಸುಳ್ಳು ಸುದ್ದಿ ಸೃಷ್ಟಿ ಆರೋಪ: ದೂರು ದಾಖಲು

ಬೆಂಗಳೂರು,ಏ.10- ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾ ಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ತಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‍ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು ಎಂದು ಮರುಕ ವ್ಯಕ್ತಪಡಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಎಚ್ಚರಿಕೆ ವಹಿಸಿ. ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page