Friday, January 16, 2026

ಸತ್ಯ | ನ್ಯಾಯ |ಧರ್ಮ

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

ಮೈಸೂರಿನ ಮುಡಾ ಅವ್ಯವಹಾರದ ಆರೋಪದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಚುನಾವಣಾ ಅಫಿಡವಿಟ್ ನಲ್ಲಿ ಮಾಹಿತಿ ಮುಚ್ಚಿಟ್ಟ ಆರೋಪದಡಿಯಲ್ಲಿ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.

ಸಾಮಾಜಿಕ ಹೋರಾಟಗಾರ ಅಬ್ರಾಹಂ ಎಂಬುವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಅದರಲ್ಲಿ 2013ರ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಕೃಷಿ ಭೂಮಿಯನ್ನು ಹೊಂದಿದ್ದರೂ, ಮಾಹಿತಿ ಮುಚ್ಚಿಟ್ಟಿರುವುದಾಗಿ ಆರೋಪಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಹೆಸರಿನಲ್ಲಿ 3.16 ಎಕರೆ ಕೃಷಿ ಭೂಮಿ ಇದೆ. ಚುನಾವಣಾ ಸಂದರ್ಭದಲ್ಲಿ ಸಲ್ಲಿಸಿರುವಂತ ಅಫಿಡವಿಟ್ ನಲ್ಲಿ ಈ ಬಗ್ಗೆ ಉದ್ದೇಶಪೂರ್ವಕವಾಗಿಯೇ ಕಲಂನಲ್ಲಿ ಖಾಲಿ ಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಚುನಾವಣಾ ಅಫಿಡವಿಟ್ ನಲ್ಲಿ ಕೃಷಿ ಭೂಮಿಯ ಬಗ್ಗೆ ಮಾಹಿತಿ ಮುಚ್ಚಿಟ್ಟ ಸಿಎಂ ಸಿದ್ಧರಾಮಯ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಕೋರಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page