Tuesday, November 12, 2024

ಸತ್ಯ | ನ್ಯಾಯ |ಧರ್ಮ

ಪಟಾಕಿ ಸಂಪೂರ್ಣ ನಿಷೇಧ :ದೆಹಲಿ ಸರ್ಕಾರಕ್ಕೆ ಸು.ಕೋರ್ಟ್ ಗಡುವು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ತೀವ್ರವಾದ ಹವಾಮಾನ ವೈಪರೀತ್ಯದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ್ದು, ವಿಶೇಷವಾಗಿ ಪಟಾಕಿ ನಿಷೇಧಕ್ಕೆ ಸರ್ಕಾರಕ್ಕೆ ಗಡುವು ನೀಡಿದೆ.

ವಿಚಾರಣೆ ವೇಳೆ ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪಟಾಕಿ ಸಿಡಿಸಿದರೆ ಅದು ಜನರ ಆರೋಗ್ಯದ ಮೂಲಭೂತ ಹಕ್ಕಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ಮತ್ತೊಮ್ಮೆ ಛೀಮಾರಿ ಹಾಕಿದೆ.

ಪಟಾಕಿ ತಯಾರಿಕೆ, ಮಾರಾಟ ಮತ್ತು ಸಿಡಿಸುವಿಕೆಯ ನಿಷೇಧವು ರಾಜಧಾನಿ ದೆಹಲಿಯಲ್ಲಿ ಅಕ್ಟೋಬರ್‌ನಿಂದ ಜನವರಿವರೆಗೆ ಮಾತ್ರ ಅನ್ವಯಿಸುತ್ತದೆ. ಇಡೀ ವರ್ಷಕ್ಕೆ ಏಕೆ ಅನ್ವಯಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಅಧಿಕಾರಿಗಳನ್ನು ‘ನಿಷೇಧ ಕೆಲವೇ ತಿಂಗಳುಗಳ ಕಾಲ ಏಕೆ? ವರ್ಷವಿಡೀ ವಾಯು ಮಾಲಿನ್ಯ ಹೆಚ್ಚುತ್ತಲೇ ಇರುತ್ತದೆ ಎಂದು ಪ್ರಶ್ನಿಸಿದೆ.

ಪಟಾಕಿ ನಿಷೇಧಿಸಲು ಏನು ಮಾಡಲಾಗಿದೆ ಎಂಬುದನ್ನು ವಿವರಿಸಿ ದೆಹಲಿ ಪೊಲೀಸ್ ಆಯುಕ್ತರು ಅಫಿಡವಿಟ್ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಪಟಾಕಿ ನಿಷೇಧಿಸಲು ವಿಶೇಷ ಸೆಲ್ ರಚಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಎಲ್ಲಾ ಎನ್‌ಸಿಆರ್ ರಾಜ್ಯಗಳು ಮಾಲಿನ್ಯವನ್ನು ಕಡಿಮೆ ಮಾಡಲು ತೆಗೆದುಕೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲು ಸೂಚಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page