ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಮಾಧ್ಯಮಗಳು ಈ ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನ ವಾಹಿನಿಯ ಮೂಲಕ ಪಡೆದುಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಬಿಎಂಆರ್‌ಸಿಎಲ್ ಪ್ರಕಾರ ಈ ನಿರ್ಬಂಧ ಭದ್ರತಾ ಕಾರಣದಿಂದಾಗಿ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
ಆಗಸ್ಟ್ 10, 2025 ರಂದು ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ, ಎಸ್‌ಪಿಜಿ ನಿಯಮಾವಳಿ ಪ್ರಕಾರ, ಭದ್ರತಾ ಕಾರಣಗಳಿಂದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ನೇರವಾಗಿ ಸ್ಥಳದಲ್ಲಿ ಕಾರ್ಯಕ್ರಮವನ್ನು ವರದಿ ಮಾಡಲು ಅವಕಾಶವಿರುವುದಿಲ್ಲ. ಆದರೆ, ಪ್ರಧಾನ ಮಂತ್ರಿಗಳು ಉದ್ಘಾಟನೆಯ ನೇರ ಪ್ರಸಾರದ ವೀಡಿಯೊ ಲಿಂಕ್ ಅನ್ನು ಮಾಧ್ಯಮಕ್ಕೆ ದೂರದರ್ಶನದ ಮೂಲಕ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಸಂಬಂಧಿತ ಛಾಯಾಚಿತ್ರಗಳನ್ನು ಸಹ ಮಾಧ್ಯಮಗಳಿಗೆ ಲಭ್ಯವಿರಿಸಲಾಗುತ್ತದೆ. ನಿಮ್ಮ ಸಹಕಾರವನ್ನು ವಿನಂತಿಸುತ್ತೇವೆ ಎಂದು ಮನವಿ ಮಾಡಿದ್ದಾರೆ.