Home ಬ್ರೇಕಿಂಗ್ ಸುದ್ದಿ ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾಗೆ ಷರತ್ತುಬದ್ಧ ಅನುಮತಿ

ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾಗೆ ಷರತ್ತುಬದ್ಧ ಅನುಮತಿ

0

ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನ ಭೇಟಿಯಾಗಲು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಷರತ್ತುಬದ್ಧ ಅನುಮತಿ ನೀಡಿದೆ.

ದೆಹಲಿ ಹೈಕೋರ್ಟ್ ನೀಡಿದ ಷರತ್ತುಗಳ ಅಡಿಯಲ್ಲಿ ಮನೀಶ್ ಸಿಸೋಡಿಯಾ ಯಾವುದೇ ಮಾಧ್ಯಮಗಳೊಂದಿಗೆ ಮಾತನಾಡುವಂತಿಲ್ಲ ಹಾಗೂ ಯಾವುದೇ ಪಕ್ಷ ಅಥವಾ ರಾಜಕೀಯ ಚಟುವಟಿಕೆ ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಷರತ್ತು ವಿಧಿಸಿದೆ.

ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪ್ರಸ್ತುತ ಜೈಲಿನಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ನಿರಾಕರಿಸಿತ್ತು.

ಇದಕ್ಕೂ ಮೊದಲು ಜೂನ್‌ನಲ್ಲಿ, ದೆಹಲಿ ಹೈಕೋರ್ಟ್ ಸಿಸೋಡಿಯಾ ಅವರ ಪತ್ನಿಯನ್ನು ಮಥುರಾ ರಸ್ತೆಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಒಂದು ದಿನದ ಮಟ್ಟಿಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಭೇಟಿ ಮಾಡಲು ಅನುಮತಿ ನೀಡಿತ್ತು. ಅಂದಿನಿಂದ ಸಿಸೋಡಿಯಾ ತನ್ನ ಪತ್ನಿಯನ್ನು ಭೇಟಿ ಮಾಡಿರಲಿಲ್ಲ.

You cannot copy content of this page

Exit mobile version