Friday, June 14, 2024

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್‌ನ 7 ಜನಪ್ರಿಯ ಗ್ಯಾರಂಟಿಗಳ ಬಗ್ಗೆ ನಿಮಗೆಷ್ಟು ಗೊತ್ತು?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 8 ದಿನ ಬಾಕಿ ಇರುವ ಸಂದರ್ಭದಲ್ಲಿ ಕಾಂಗ್ರೆಸ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಂದ ಏಳು ಗ್ಯಾರಂಟಿ ಘೋಷಣೆ ಬಳಿಕ ಕಾಂಗ್ರೆಸ್ ಇಂದು (ಮಂಗಳವಾರ) ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಜನಪ್ರಿಯ 7 ಗ್ಯಾರಂಟಿಗಳು –

ಈಗಾಗಲೇ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಅಂತ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರು ತಮ್ಮ ಉಪಸ್ಥಿತಿಯಲ್ಲಿ 7 ಜನಪ್ರಿಯ ಗ್ಯಾರಂಟಿ ಘೋಷಣೆಗಳನ್ನು ಮಾಡಿದ್ದಾರೆ.

ಉಚಿತ ವಿದ್ಯುತ್ ಸೌಲಭ್ಯ:

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಮೊದಲ ಘೋಷಣೆ ಮಾಡಿದರು.

ಬಿಪಿಎಲ್ ಕುಟುಂಬಕ್ಕೆ 10kg ಅಕ್ಕಿ:

ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಮೊದಲನೆಯದಾಗಿ ಜನಪ್ರಿಯ ಅನ್ನಭಾಗ್ಯ ಘೋಷಣೆ ಮಾಡಿದ್ದರು. ಪರ ವಿರೋಧ ಏನೇ ಇರಲಿ, ಜನರು ಮೂರು ಹೊತ್ತು ನೆಮ್ಮದಿಯಾಗಿ ಅನ್ನ ಉಣಿಸುವ ಕಾಂಗ್ರೆಸ್ ನ ಈ ಯೋಜನೆ ಟಾಪ್ ಜನಪ್ರಿಯ ಯೋಜನೆಯಲ್ಲಿ ಮೊದಲನೇ ಸ್ಥಾನದಲ್ಲಿ ನಿಲ್ಲುತ್ತದೆ. ಇದೀಗ ಉಚಿತ ಅಕ್ಕಿಯನ್ನು 10 ಕೆಜಿಗೆ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಇದು ಅನ್ವಯ ಆಗಲಿದೆ.

ಮಹಿಳೆಯರಿಗೆ ಆರ್ಥಿಕ ಸಹಾಯ:

ಎಲ್ಲರಿಗೂ ಯೋಜನೆಗಳನ್ನು ರೂಪಿಸುವ ರಾಜಕೀಯ ಪಕ್ಷಗಳು ಮನೆಯಲ್ಲಿ ಇರುವ ಮಹಿಳೆಯರಿಗೆ ಯೋಜನೆ ರೂಪಿಸುತ್ತಿಲ್ಲವೇಕೆ ಎಂಬುವ ಬೇಡಿಕೆಯನ್ನು ಕಾಂಗ್ರೆಸ್‌ ಗಂಭೀರವಾಗಿ ತೆಗೆದುಕೊಂಡಂತಿದೆ. ರಾಜ್ಯದ ಎಲ್ಲ ಮಹಿಳೆಯರಿಗೆ ಪ್ರತಿ ತಿಂಗಳು ತಲಾ 2000 ರೂಪಾಯಿ ಉಚಿತವಾಗಿ ನೀಡುವುದು ಕಾಂಗ್ರೆಸ್ ಮೂರನೇ ಗ್ಯಾರಂಟಿಯನ್ನು ಘೋಷಣೆ ಮಾಡುವ ಮೂಲಕ ಮಹಿಳಾ ಪರವಾಗಿದೆ ಎಂಬುದನ್ನು ತೋರಿಸಿದೆ.

ನಿರುದ್ಯೋಗಿ ಯುವಜನತೆಗೆ ಆರ್ಥಿಕ ನೆರವು:

ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್​ನ 4ನೇ ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ. ಕೈ ಪಕ್ಷ ಅಧಿಕಾರಕ್ಕೆ ಬಂದರೆ, ಯುವನಿಧಿ ಎಂಬ ಯೋಜನೆಯಲ್ಲಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ 1,500 ರೂ. ಭತ್ಯೆ ನೀಡಲಿದ್ದಾರೆ.

ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ:

ಈಗಾಗಲೇ ದೆಹಲಿಯಲ್ಲಿ ಜಾರಿಯಲ್ಲಿರುವ ಜನಪ್ರಿಯ ಯೋಜನೆ ಉಚಿತ ಬಸ್ ಸೌಲಭ್ಯ ಯೋಜನೆಯಲ್ಲಿ ಕಾಂಗ್ರೆಸ್ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವುದಾಗಿ ಐದನೇ ಗ್ಯಾರಂಟಿಯಲ್ಲಿ ಘೋಷಿಸಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ:

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಬಹುದಿನದ ಬೇಡಿಕೆಯಾಗಿರುವ ವೇತನ ಹೆಚ್ಚಳದ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಂತ್ತೆ ಕಾಣುತ್ತದೆ. ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ. ವರೆಗೆ ವೇತನ ಹೆಚ್ಚಿಸುವುದಾಗಿ ಕಾಂಗ್ರೆಸ್​ ಆರನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು ಎಂದು ಹೇಳಿದೆ.

ವಿಶೇಷ ‘ಕೃಷಿ ನಿಧಿ’ ಯೋಜನೆ:

ರೈತರ ಹಿತ ಕಾಯುವ ಉದ್ದೇಶದಿಂದ ಕೃಷಿ ನಿಧಿ ಯೋಜನೆಯನ್ನು ಕಾಂಗ್ರೆಸ್ ಏಳನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯ ಮುಖ್ಯಾಂಶವೆಂದರೆ, 5 ವರ್ಷಗಳಲ್ಲಿ ರೈತರಿಗೆ ಬಜೆಟ್ ನಲ್ಲಿ ₹1.5 ಲಕ್ಷ ಕೋಟಿ, ಪ್ರತಿ ವರ್ಷ ಬಜೆಟ್‌ನಿಂದ ₹30,000 ಕೋಟಿ ರೈತರಿಗೆ ಸೇರಲಿದೆ. ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ, ಹಾಲಿನ ಸಬ್ಸಿಡಿ ₹5ರಿಂದ ₹7ಕ್ಕೆ ಹೆಚ್ಚಳ ಮಾಡುವ “ಕೃಷಿ ನಿಧಿ” ಎಂಬ ಗ್ಯಾರಂಟಿ ಯೋಜನೆಯಲ್ಲಿ ಘೋಷಣೆ ಮಾಡಿದ್ದಾರೆ.

ಇನ್ನು ಹತ್ತು ಹಲವು ಜನಪ್ರಿಯ ಗ್ಯಾರಂಟಿ ಘೋಷಣೆಗಳು ಇಂದು ಘೋಷಿಸಿದ್ದು ಅದರಲ್ಲಿ ಕೆಲವನ್ನು ಇಲ್ಲಿ ಸೂಚಿಸಲಾಗಿದೆ –

Related Articles

ಇತ್ತೀಚಿನ ಸುದ್ದಿಗಳು