Ladakh Council elections | ಲೇಹ್: ಲಡಾಖ್ ವಿಭಾಗದ ಕೇಂದ್ರಾಡಳಿತ ಪ್ರದೇಶವಾದ ಕಾರ್ಗಿಲ್‌ನಲ್ಲಿ ಇತ್ತೀಚೆಗೆ ನಡೆದ ಲಡಾಖ್ ಸ್ವಾಯತ್ತ ಹಿಲ್ ಕೌನ್ಸಿಲ್‌ಗೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದೆ. 26 ಸ್ಥಾನಗಳಿಗೆ 85 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 19 ಸ್ಥಾನಗಳನ್ನು ಗೆದ್ದಿದೆ. ಎನ್‌ಸಿ 11 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 2 ಸ್ಥಾನ ಮತ್ತು ಐಎನ್‌ಡಿಪಿ ಒಂದು ಸ್ಥಾನ ಗಳಿಸಿದೆ. ಇನ್ನು 4 ಸ್ಥಾನಗಳ ಫಲಿತಾಂಶ ಬರಬೇಕಿದೆ.
ಈ ಹಿಂದೆ ಆಗಸ್ಟ್ 5, 2019ರಂದು, ಕೇಂದ್ರದ ಬಿಜೆಪಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ಸ್ವಾಯತ್ತತೆಗೆ ಸಂಬಂಧಿಸಿದ 370ನೇ ವಿಧಿಯನ್ನು ರದ್ದುಗೊಳಿಸಿತ್ತು. ಇದರೊಂದಿಗೆ ಅಂದು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿತ್ತು. ಈ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪಕ್ಷಗಳ ಮುಖಂಡರನ್ನು ಗೃಹಬಂಧನದಲ್ಲಿರಿಸಲಾಗಿತ್ತು.
https://x.com/ANI/status/1711014506779054197?s=20
ಮತ್ತೊಂದೆಡೆ, ಆರ್ಟಿಕಲ್ 370 ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಭಜನೆಯ ಸುಮಾರು ನಾಲ್ಕು ವರ್ಷಗಳ ನಂತರ, ಆ ಪ್ರದೇಶದಲ್ಲಿ ಮೊದಲ ಬಾರಿಗೆ ಸ್ಥಳೀಯ ಚುನಾವಣೆಗಳು ನಡೆದವು. ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಲಡಾಖ್ ಸ್ವಾಯತ್ತ ಹಿಲ್ ಕೌನ್ಸಿಲ್ ಚುನಾವಣಾ ಫಲಿತಾಂಶಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಜನರು ಈ ತೀರ್ಪು ನೀಡಿದ್ದಾರೆ ಎಂದು ಹೇಳಿಕೊಂಡಿವೆ.
ಇದೇ ವೇಳೆ ಕಾರ್ಗಿಲ್ ಜನತೆ ರಾಜ್ಯ ವಿಭಜನೆಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದೇವೆ ಎಂದು ಮತದಾನದ ವೇಳೆ ಅಳಲು ತೋಡಿಕೊಂಡರು. ಅವರು ಜಮ್ಮು ಮತ್ತು ಕಾಶ್ಮೀರವನ್ನು ಮರು ವಿಲೀನಗೊಳಿಸಬೇಕು ಮತ್ತು ರಾಜ್ಯವನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಚುನಾವಣಾ ಫಲಿತಾಂಶದ ನಂತರ ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟದ ವಿಜಯೋತ್ಸವ ಆಚರಿಸಲಾಯಿತು.