ಚನ್ನಪಟ್ಟಣ : ಬಾರೀ ಅಂತರದ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್

ಅಚ್ಚರಿಯ ಬೆಳವಣಿಗೆಯಲ್ಲಿ ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆ ಬಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 8 ನೇ ಸುತ್ತಿನ ಮತ ಎಣಿಕೆಯಲ್ಲಿ ಸಿಪಿ ಯೋಗೇಶ್ವರ್ 11 ಸಾವಿರ ಮತಗಳಿಗಿಂತ ಹೆಚ್ಚು ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

5 ಮತ್ತು 6 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಅಲ್ಪ ಮತಗಳ ಮುನ್ನಡೆ ಇದ್ದರು. ಆದರೆ ಏಕಾಏಕಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡದ್ದು, ಎನ್ ಡಿಎ ಪಾಳಯದಲ್ಲಿ ನಡುಕ ಶುರುವಾಗಿದೆ.

ಅಷ್ಟೇ ಅಲ್ಲದೆ ಕಾಂಗ್ರೆಸ್ ಈಗ ಚನ್ನಪಟ್ಟಣ, ಶಿಗ್ಗಾಂವ, ಸಂಡೂರು ಮೂರೂ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು