ಸಂಪೂರ್ಣ ಉಲ್ಟಾ ಆದ ಶಿಗ್ಗಾಂವಿ ಸಮೀಕ್ಷೆ; ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಭರ್ಜರಿ ಗೆಲುವು

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ತೆರವಾದ ಕ್ಷೇತ್ರವಾದ ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಇಲ್ಲಿ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.

ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 83,400 ಮತಗಳನ್ನು ಪಡೆದುಕೊಂಡಿದ್ದು, 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಖಚಿತವಾಗಿದೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದು, ಮೂರೂ ಕ್ಷೇತ್ರಗಳಲ್ಲಿ ಅಧಿಕೃತ ಘೋಷಣೆಯಷ್ಟೇ ಹೊರಬೀಳಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು