Saturday, April 27, 2024

ಸತ್ಯ | ನ್ಯಾಯ |ಧರ್ಮ

ಜೆಪಿ ನಡ್ಡಾ ವಿವಾದಾತ್ಮಕ “ಮುಸ್ಲಿಂ ಲೀಗ್ ಪ್ರಣಾಳಿಕೆ” ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

“ಇದು ಕಾಂಗ್ರೆಸ್ ನ ಪ್ರಣಾಳಿಕೆಯೇ ಅಥವಾ ಮುಸ್ಲಿಂ ಲೀಗ್ ನದ್ದೇ?” : ಜೆಪಿ ನಡ್ಡಾ

ಕಾಂಗ್ರೆಸ್‌ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಮೇಲೆ ಹೊಸ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೋಮವಾರ, ಇದು ಕಾಂಗ್ರೆಸ್ ನ ಪ್ರಣಾಳಿಕೆಯೇ ಅಥವಾ ಮುಸ್ಲಿಂ ಲೀಗ್ ನ ಪ್ರಣಾಳಿಕೆಯೇ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಹಳೆಯ ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿರುವಾಗ ಈ ಪ್ರಣಾಳಿಕೆ ಮುಸ್ಲಿಂ ಸಮುದಾಯದ ಪರವಾಗಿದೆ ಎಂದು ದೂರಿದ್ದಾರೆ.

“ಕಾಂಗ್ರೆಸ್ ಪ್ರಣಾಳಿಕೆಯನ್ನು ನೋಡಿದರೆ ಇದು ಕಾಂಗ್ರೆಸ್ಸಿನ ಪ್ರಣಾಳಿಕೆಯೇ ಅಥವಾ ಮುಸ್ಲಿಂ ಲೀಗ್ನ ಪ್ರಣಾಳಿಕೆಯೇ ಎಂಬುದು ಸ್ಪಷ್ಟವಾಗಿಲ್ಲ! ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತುಷ್ಟೀಕರಣ ಮತ್ತು ಮೀಸಲಾತಿಯ ಬಗ್ಗೆ ಏನು ಹೇಳಿದೆ ಎಂಬುದರ ಕುರಿತು ಸ್ಪಷ್ಟೀಕರಣವನ್ನು ನೀಡಬೇಕಾಗಿದೆ ಎಂದು ನಡ್ಡಾ ಹೇಳಿದರು. ದೇಶದ ಜನರು ಪದೇ ಪದೇ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ತಮ್ಮ ತುಷ್ಟೀಕರಣ ರಾಜಕಾರಣದಿಂದ ಹಿಂದೆ ಸರಿಯುತ್ತಿಲ್ಲ ಎಂದು ಹೇಳಿದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕೂಡಾ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಮಾತನಾಡಿ, “ಪ್ರತಿಯೊಂದು ಪುಟವೂ ಭಾರತವನ್ನು ತುಂಡು ತುಂಡಾಗಿಸುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಮೋದಿ ಯುಪಿಯ ಸಹರಾನ್‌ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಹೇಳಿದರು. “ಇದು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ ಮತ್ತು ಉಳಿದಿರುವುದು ಸಂಪೂರ್ಣವಾಗಿ ಎಡಪಂಥೀಯರಿಂದ ಪ್ರಭಾವ ಹೊಂದಿದೆ” ಎಂದು ಮೋದಿ ಹೇಳಿದರು.

ಪ್ರಧಾನಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 180 ಸ್ಥಾನಗಳ ಗಡಿ ದಾಟಲು ಹೆಣಗಾಡುವ ನಿರೀಕ್ಷೆಯ ಬಗ್ಗೆ ಮೋದಿ ಭಯಭೀತರಾಗಿದ್ದಾರೆ, ಆದ್ದರಿಂದ “ಅದೇ ಕ್ಲೀಚ್ಡ್ ಹಿಂದೂ-ಮುಸ್ಲಿಂ ಸ್ಕ್ರಿಪ್ಟ್” ಅನ್ನು ಆಶ್ರಯಿಸಿದ್ದಾರೆ ಎಂದು ಹೇಳಿದೆ.

ಬಿಜೆಪಿ ಸಿದ್ಧಾಂತವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಜಿನ್ನಾ ಅವರ ಮುಸ್ಲಿಂ ಲೀಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಹೊರತು ಕಾಂಗ್ರೆಸ್ ಪಕ್ಷವಲ್ಲ ಎಂದು ಪಕ್ಷ ಹೇಳಿಕೊಂಡಿದೆ.

“ಶ್ಯಾಮ ಪ್ರಸಾದ್ ಮುಖರ್ಜಿಯವರು ಜಿನ್ನಾರ ಮುಸ್ಲಿಂ ಲೀಗ್ ಜೊತೆ ಒಪ್ಪಂದ ಮಾಡಿಕೊಂಡರು. ಕಾಂಗ್ರೆಸ್ ಎಂದಿಗೂ ಒಪ್ಪಂದ ಮಾಡಿಕೊಂಡಿರಲಿಲ್ಲ…ಲಾಲ್ ಕೃಷ್ಣ ಅಡ್ವಾಣಿ ಮತ್ತು ಜಸ್ವಂತ್ ಸಿಂಗ್ ಪಾಕಿಸ್ತಾನಕ್ಕೆ ಹೋಗಿ ಜಿನ್ನಾರನ್ನು ಹೊಗಳಿದ್ದರು…ಯಾವ ಕಾಂಗ್ರೆಸ್ ನಾಯಕರೂ ಹಾಗೆ ಮಾಡಿಲ್ಲ…” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು