Home ರಾಜಕೀಯ ಸರ್ಕಾರಿ ಹುದ್ದೆಗಳ ಭರ್ತಿ ವಿಚಾರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಸರ್ಕಾರಿ ಹುದ್ದೆಗಳ ಭರ್ತಿ ವಿಚಾರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

0

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳ ಭರ್ತಿ ವಿಚಾರದಲ್ಲಿ ಸರ್ಕಾರ ವಿಫಲ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಗರಣಗಳಿಂದ ರಾಜ್ಯದಲ್ಲಿನ ಯುವಜನತೆ ನಿರುದ್ಯೋಗದಿಂದ ಕಂಗಾಲಾಗಿದ್ದು, ಈ ಸಮಸ್ಯೆಗೆ ರಾಜ್ಯ ಸರ್ಕಾರವೇ ನೇರಹೊಣೆ ಎಂದು ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಉದ್ಯೋಗಾಕಾಂಕ್ಷಿಗಳ ಬಳಿ ಪುಸ್ತಕ, ಪೆನ್ನು, ಭವಿಷ್ಯದ ಕನಸು ಬಿಟ್ಟರೆ ಬೇರೇನೂ ಇಲ್ಲ. ಸರ್ಕಾರಕ್ಕೆ ಲಂಚದ ಆಸೆ, ಕಮಿಷನ್ ಆಸೆ ಬಿಟ್ಟರೆ ಬೇರೇನೂ ಇಲ್ಲ. 40% ಸರ್ಕಾರ ನಡೆಸಿದ ಪಿಎಸ್‌ಐ ಅಕ್ರಮದಿಂದಾಗಿ ಪ್ರಾಮಾಣಿಕ ಅಭ್ಯರ್ಥಿಗಳ ವಯಸ್ಸು ಮೀರುತ್ತಿದೆ, ಬದುಕು ಛಿದ್ರವಾಗಿದೆ. ಹೀಗಾಗಿ ಇವರ ಆತಂತ್ರದ ಬದುಕಿಗೆ ಪರಿಹಾರವೇನು ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಿದೆ.

ಸ್ವತಂತ್ರ್ಯ ಉದ್ಯಾನದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಪಧವೀದರರ ಪ್ರತಿಭಟನೆ

You cannot copy content of this page

Exit mobile version