Tuesday, January 27, 2026

ಸತ್ಯ | ನ್ಯಾಯ |ಧರ್ಮ

ಲೈಂಗಿಕ ದೌರ್ಜನ್ಯದ ಅಡಿಯಲ್ಲಿ ಕಾಂಗ್ರೆಸ್ ಮುಖಂಡನ ಬಂಧನ

ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಮನೋಜ್ ಕರ್ಜಗಿ ಲೈಂಗಿಕ ದೌರ್ಜನ್ಯದ ಆರೋಪದ ಅಡಿಯಲ್ಲಿ ಬಂಧನವಾಗಿದ್ದಾರೆ. ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿ ಲೇ ಮೋರ್ಜ್ ಬ್ಯೂಟಿ ಸ್ಪಾ ದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮನೋಜ್ ಕರ್ಜಗಿ ಬಂಧನವಾಗಿದೆ.

ತನ್ನದೇ ಒಡೆತನದ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಪ್ರಿಯಾಂಕಾ ಎಂಬ ಯುವತಿ ಮೇಲೆ ಮನೋಜ್ ಕರ್ಜಗಿ ಲೈಂಗಿಕ ಕಿರುಕುಳ ನಡೆಸಿದ ಆರೋಪ ಎದುರಿಸಿದ್ದಾರೆ.

ಯುವತಿ ನೀಡಿದ ದೂರಿನ ಮೇಲೆ ಪೊಲೀಸರು ಮನೋಜ್ ಕರ್ಜಗಿಯನ್ನು ಬಂಧಿಸಿದ್ದಾರೆ. ಇದರ ನಡುವೆ ಯುವತಿ ಕಡೆಯವರು ಮನೋಜ್ ಕರ್ಜಗಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಯುವತಿ ಕಡೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಇದರ ಜೊತೆಗೆ ಯುವತಿ ಕಡೆಯವರು ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಮನೋಜ್ ಕರ್ಜಗಿ ಪ್ರತಿದೂರು ದಾಖಲಿಸಿದ್ದಾರೆ. ಸಧ್ಯ ಈ ಎರಡೂ ಪ್ರಕರಣದ ಅಡಿಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page