Tuesday, November 4, 2025

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ ನಿಧನ

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ (79) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H​.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ ಜನಿಸಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ  ಗೆದ್ದಿದ್ದರು.

ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.

ಸಿದ್ದರಾಮಯ್ಯ ಸಂತಾಪ
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page