Home ದೇಶ ಒಂದೇ ಒಂದು ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲಾಗದ ಮೋದಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಜೈರಾಮ್...

ಒಂದೇ ಒಂದು ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲಾಗದ ಮೋದಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಜೈರಾಮ್ ರಮೇಶ್

0

ಪ್ರಧಾನ ಮಂತ್ರಿ ದಕ್ಷತಾ ಔರ್ ಕುಶಲತಾ ಸಂಪನ್ನ ಹಿತಗ್ರಾಹಿ (ಪಿಎಂ-ದಕ್ಷ) ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಸ್ವರೂಪದ ಲೋಪಗಳು ಕಂಡುಬಂದಿದ್ದು, ಯಾವುದೇ ಯೋಜನೆಯನ್ನು ಸಮರ್ಥವಾಗಿ ಜಾರಿಗೆ ತರಲು ವಿಫಲವಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ಪಕ್ಷ ಕಟುವಾಗಿ ಟೀಕಿಸಿದೆ.

ಈ ಸಂಬಂಧ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ‘ಎಕ್ಸ್’ (X) ಜಾಲತಾಣದಲ್ಲಿ ಮಾಧ್ಯಮ ವರದಿಯೊಂದರ ಸ್ಕ್ರೀನ್‌ಶಾಟ್ ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿಗಳು (ಎಸ್‌ಸಿ), ಇತರ ಹಿಂದುಳಿದ ವರ್ಗಗಳು (ಒಬಿಸಿ), ಆರ್ಥಿಕವಾಗಿ ಹಿಂದುಳಿದ ವರ್ಗಗಳು, ಅಧಿಸೂಚಿತ ಹಾಗೂ ಸంచಾರ ಬುಡಕಟ್ಟುಗಳು, ಕಸ ಹಾಯುವವರು ಮತ್ತು ಪೌರ ಕಾರ್ಮಿಕರಂತಹ ಅಂಚಿನಲ್ಲಿರುವ ಅರ್ಹ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ ನೀಡಿ, ಅವರನ್ನು ಉದ್ಯೋಗ ಅಥವಾ ಸ್ವಯಂ ಉದ್ಯೋಗಕ್ಕೆ ಸಜ್ಜುಗೊಳಿಸುವ ಮುಖ್ಯ ಉದ್ದೇಶದಿಂದ ಈ ಪಿಎಂ-ದಕ್ಷ ಯೋಜನೆಯನ್ನು ಆರಂಭಿಸಲಾಗಿತ್ತು. ಆದರೆ ಈ ಯೋಜನೆಯು “ಹೆಸರು ಮಾತ್ರ ದೊಡ್ಡದು, ಆದರೆ ಯಾವುದೇ ಫಲಿತಾಂಶವಿಲ್ಲ” ಎಂಬಂತಾಗಿದೆ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಸಮಾಜದ ಕಟ್ಟಕಡೆಯ ವರ್ಗಗಳಿಗೆ ಅಗತ್ಯವಿರುವ ಕೌಶಲ್ಯ, ತರಬೇತಿ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕಿದ್ದ ಈ ಮಹತ್ವದ ಯೋಜನೆಯನ್ನು ಮೋದಿ ಸರ್ಕಾರವು ಕೇವಲ ಕಾಗದದ ಮೇಲಷ್ಟೇ ಸೀಮಿತಗೊಳಿಸಿದೆ ಎಂದು ಅವರು ಆರೋಪಿಸಿದ್ದಾರೆ. ದೇಶದ ಜನತೆಯ ಸಂಪೂರ್ಣ ನಂಬಿಕೆಯನ್ನು ಮೋದಿ ಸರ್ಕಾರ ಕಳೆದುಕೊಂಡಿದ್ದು, ಇದರ ಅಂತ್ಯದ ದಿನಗಳು ಹತ್ತಿರವಾಗುತ್ತಿವೆ ಎಂದು ಅವರು ಎಚ್ಚರಿಸಿದ್ದಾರೆ.

You cannot copy content of this page

Exit mobile version