ನವದೆಹಲಿ: ಕಾಂಗ್ರೆಸ್ ನಾಯಕಾರದ ಸೊನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಕೇಂದ್ರ ಸರ್ಕಾರ ಭಯೋತ್ಪದಾಕರಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಆಡಳಿತ, ಅಘೋಷಿತ ತುರ್ತು ಹೇರಿದಂತಾಗಿದೆ ಎಂದು ಆರೋಪ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಜಾರಿ ನಿರ್ದೇಶನಲಾಯವು(ಇಡಿ) ಬುಧವಾರ ಯಂಗ್ ಇಂಡಿಯಾ ಕಂಪನಿಯ, ನ್ಯಾಷನಲ್ ಹೆರಾಲ್ಡ್ ಕೇಂದ್ರ ಕಛೇರಿಯನ್ನು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಕ್ತಾರರು ತುರ್ತು ಪತ್ರಿಕಾಗೋಷ್ಠಿಯನ್ನು ಕರೆದು ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೊನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪವನ್ ಬನ್ಸಲ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ, ನವದೆಹಲಿ ನ್ಯಾಷನಲ್ ಹೆರಾಲ್ಡ್ ಕೇಂದ್ರ ಕಛೇರಿ ಸೇರಿದಂತೆ ದೇಶದ 11 ಕಡೆ ಇಡಿ ದಾಳಿ ನಡೆಸಿ, ಸಿಕ್ಕ ಮಾಹಿತಿಯನ್ನು ಆಧರಿಸಿ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆಂದು ಕಾಂಗ್ರೆಸ್ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದರು.