ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ಗೆಹ್ಲೋಟ್ ಅವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಪ್ರಬಲ ಪ್ರತಿಪಕ್ಷವಾಗಿ ಹೊಮ್ಮುವುದು ಅಗತ್ಯವಿದೆ ಅದಕ್ಕಾಗಿ ಶ್ರಮಿಸಲು ಸಿದ್ದರಿದ್ದೇವೆ ಎಂದು ಹೇಳಿದರು.
ಒಂದು ವೇಳೆ ಅಧ್ಯಕ್ಷ ಸ್ಥಾನದಲ್ಲಿ ಗೆದ್ದರೆ ಮುಖ್ಯಮಂತ್ರಿ ಸ್ಥಾನ ತೆರವಾಗಲಿದೆ. ಆಗ ಮುಂದಿನ ಮುಖ್ಯಮಂತ್ರಿ ಯಾರೆಂಬುವುದನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜಸ್ಥಾನದ ಉಸ್ತುವಾರಿ ಸಚಿವರು ತೀರ್ಮಾನಿಸಲಿದ್ದಾರೆ ಎಂದು ಸುದ್ದಿಗಾರರಿಗೆ ಹೇಳಿದರು.
ನಾಮ ಪತ್ರ ಸಲ್ಲಿಸಲು ದಿನಾಂಕ ನಿಗದಿ ಮಾಡಿಲ್ಲ. ರಾಜಸ್ಥಾನಕ್ಕೆ ತೆರಳಿದ ಬಳಿಕ ದಿನಾಂಕ ನಿಗದಿ ಮಾಡಿ ನಾಮ ಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.