Monday, January 12, 2026

ಸತ್ಯ | ನ್ಯಾಯ |ಧರ್ಮ

ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷದಿಂದ ಹಾಸನದಲ್ಲಿ ಬೃಹತ್‌ ಸಮಾವೇಶ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಜೆಡಿಎಸ್ ಭದ್ರಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಮಾಡಲು ಆಡಳಿತಾರೂಢ ಕಾಂಗ್ರೆಸ್ ಡಿಸೆಂಬರ್ 5 ರಂದು ಹಾಸನದಲ್ಲಿ ರಾಜಕೀಯ ಸಮಾವೇಶವನ್ನು ಆಯೋಜಿಸಲು ಸಜ್ಜಾಗಿದೆ.

ಸೋಮವಾರ ಹಿರಿಯ ಸಚಿವರೊಂದಿಗೆ ಸಿದ್ದರಾಮಯ್ಯ ಕರೆದಿದ್ದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ.

ಸಹಕಾರ ಸಚಿವ ಕೆ ಎಸ್ ರಾಜಣ್ಣ ನೇತೃತ್ವದಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವರಿಗೆ ಸೂಚನೆ ನೀಡಿದರು.

ರಾಜಣ್ಣ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹೌದು, ಹಾಸನದಲ್ಲಿ ರಾಜಕೀಯ ಸಮಾವೇಶ ಆಯೋಜಿಸಿ ಪ್ರಬಲ ಸಂದೇಶ ನೀಡಲು ಮುಂದಾಗಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಡಿಸೆಂಬರ್ 2ರಂದು ತುಮಕೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಮತ್ತೊಂದು ಸಭೆ ನಡೆಯಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page