Friday, December 27, 2024

ಸತ್ಯ | ನ್ಯಾಯ |ಧರ್ಮ

ಮನಮೋಹನ್ ಸಿಂಗ್ ನಿಧನ ; ರಾಷ್ಟ್ರೀಯ ಶೋಕಾಚರಣೆ; ಬೆಳಗಾವಿ ‘ಗಾಂಧಿ ಭಾರತ’ ಕಾರ್ಯಕ್ರಮ ಮುಂದೂಡಿದ ಕಾಂಗ್ರೆಸ್

ಡಾ‌.ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಇಂದು ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರ ನಾಳೆ ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳ ರದ್ದುಗೊಳಿಸಿ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿ ನಾಳೆ ಬೆಳಗ್ಗೆ 11 ಗಂಟೆಗೆ ತುರ್ತು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ ಡಾ. ಮನಮೋಹನ್ ಸಿಂಗ್ ಅವರಿಗೆ ಗೌರವ ನಮನಗಳ ಸಲ್ಲಿಸಲಿದೆ ಎಂದು ತಿಳಿಸಿದೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿ, ಮನಮೋಹನ್​ ಸಿಂಗ್ ಕೊಡುಗೆ ಮರೆಯಲು ಸಾಧ್ಯವಿಲ್ಲ. ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ. ವರಿಷ್ಠರ ಜೊತೆ ಚರ್ಚಿಸಿ ಮುಂದೆ ಕಾರ್ಯಕ್ರಮ ಮಾಡುತ್ತೇವೆ. ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ ಆಚರಿಸಲಾಗುತ್ತದೆ. ನಾಳೆ ನಾನು, ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ದೆಹಲಿಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page