AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.
ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು, ಹಿರಿಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.