ಹಣದುಬ್ಬರದ ವಿರುದ್ಧ ಕಾಂಗ್ರೆಸ್‌ ರ‍್ಯಾಲಿ

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಹಣದುಬ್ಬರದ ವಿರುದ್ಧ ಕಾಂಗ್ರೆಸ್‌ ಪಕ್ಷವು ಭಾನುವಾರ ʼಮೆಹಂಗೈ ಪರ್‌ ಹಲ್ಲಾ ಬೋಲ್‌ʼ ಎಂಬ ಮೆಗಾ ರ್ಯಾಲಿ ನಡೆಸಲಿದೆ ಎಂದು ಕಾಂಗ್ರೆಸ್‌ ಮುಖಂಡ ಕೆ.ಸಿ.ವೇಣುಗೋಪಾಲ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ʼಮೋದಿ ನೇತೃತ್ವದ ಸರ್ಕಾರವು ಹಣದುಬ್ಬರದಂತಹ ಸಮಸ್ಯೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ಬಿಜೆಪಿಯವರಿಗೆ ಶಾಸಕರನ್ನು ಖರೀದಿಸುವುದೇ ಮುಖ್ಯ ಅಜೆಂಡಾವಾಗಿದೆʼ ಎಂದು ಕಿಡಿಕಾರಿದರು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ರ್ಯಾಲಿ ನಡೆಯಲಿದ್ದು, ಪಕ್ಷದ ನಾಯಕ ರಾಹುಲ್‌ ಗಾಂಧಿ ಚಾಲನೆ ನೀಡಲಿದ್ದಾರೆ ಎಂದರು.

Related Articles

ಇತ್ತೀಚಿನ ಸುದ್ದಿಗಳು