Saturday, January 17, 2026

ಸತ್ಯ | ನ್ಯಾಯ |ಧರ್ಮ

ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

ಅಸ್ಸಾಂನ ಜನರು ಬದಲಾವಣೆಯನ್ನು ಬಯಸುತ್ತಿದ್ದು, ಅಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಖಂಡಿತವಾಗಿಯೂ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಅಸ್ಸಾಂ ವಿಧಾನಸಭೆ ಚುನಾವಣೆ ಕುರಿತ ಮಹತ್ವದ ಸಭೆಯ ನಂತರ ಮಾತನಾಡಿದ ಅವರು, ಪಕ್ಷವು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದು, ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಮುನ್ನಡೆಯಲಿದೆ ಎಂದು ತಿಳಿಸಿದರು.

ಅಸ್ಸಾಂನಲ್ಲಿ ಯುವ ನಾಯಕತ್ವವಿದ್ದು, ಅವರಿಗೆ ಪಕ್ಷದ ಎಲ್ಲಾ ಹಿರಿಯ ನಾಯಕರು ಬೆಂಬಲ ನೀಡುತ್ತಿದ್ದಾರೆ. ಸಭೆಯಲ್ಲಿ ಭೂಪೇಶ್ ಬಘೇಲ್ ಸೇರಿದಂತೆ ಹಲವು ನಾಯಕರು ಚುನಾವಣಾ ತಂತ್ರಗಾರಿಕೆ ಮತ್ತು ಅಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತಮ್ಮ ಅನುಭವ ಹಾಗೂ ಸಲಹೆಗಳನ್ನು ಹಂಚಿಕೊಂಡಿದ್ದಾರೆ ಎಂದು ಡಿಕೆಶಿ ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page