Tuesday, July 29, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ: ಡಿ.ಕೆ. ಶಿವಕುಮಾರ್

ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಸಮ್ಮಿಶ್ರ ಪಾಳುದಾರರ ಬೆಂಬಲವಿಲ್ಲದೆಯೂ ಕಾಂಗ್ರೆಸ್‌ ಪಕ್ಷ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಬಳ್ಳಾರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾರ ಬೆಂಬಲವಿಲ್ಲದೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುತ್ತೆವೆ. ಇದಕ್ಕೆ ಕರ್ನಾಟಕದ ಜನತೆ 150 ಸ್ಥಾನಗಳ ಸ್ಪಷ್ಟ ಜನಾದೇಶ ನೀಡಲಿದ್ದಾರೆ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಅಡಿಯಲ್ಲಿ ಆಪಾದಿತ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ ಅಕ್ರಮಣಕಾರಿ ಅಭಿಯಾನವನ್ನು ಕೈಗೊಂಡಿದ್ದು, ಬೊಮ್ಮಾಯಿಯವರ ವಿರುದ್ಧ ಪೋಸ್ಟ್‌ರ್‌ ಮತ್ತು ಬ್ಯಾನರ್‌ಗಳೊಂದಿಗೆ ʼಪೇ ಸಿಎಂʼ ಅಭಿಯಾನವನ್ನು ಹೆಚ್ಚಿಸಿದೆ ಎಂದು ಡಿ.ಕೆ.ಶಿ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page