Friday, June 14, 2024

ಸತ್ಯ | ನ್ಯಾಯ |ಧರ್ಮ

ರಾಜ್ಯದ ಐದು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣ: ಸಚಿವ ಮುರುಗೇಶ್‌ ನಿರಾಣಿ

ಹುಬ್ಬಳ್ಳಿ: ರಾಜ್ಯದ ದಾವಣಗೆರೆ, ಬಾದಾಮಿ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಹೇಳಿದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94ನೇ ಸಂಸ್ಥಾಪನಾ ದಿನ ಹಾಗೂ ‘ವಾಣಿಜ್ಯ ರತ್ನʼಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಕಷ್ಟು ಉದ್ಯಮಿಗಳು ಒಲವು ತೋರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಕಡೆಯೂ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಅದಕ್ಕೆ ಅನುಕೂಲವಾಗುವಂತೆ ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ಮುರುಗೇಶ್‌ ನಿರಾಣಿ ಹೇಳಿದರು.

ಈ ಹಿನ್ನಲೆ ರಾಜ್ಯವು ಅಭಿವೃದ್ಧಿಯತ್ತ ಸಾಗುತ್ತಿದ್ದು, 18 ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ, ಹಾಗೆಯೇ ತುಮಕೂರು ಮತ್ತು ಶಿರಾ ನಡುವೆ ಹಾಗೂ ಬೆಳಗಾವಿಯ ಕಿತ್ತೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು