Home Uncategorized BREAKING : ಬಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ; ಅವಶೇಷಗಳಡಿ ಕಾರ್ಮಿಕರು ಸಿಕ್ಕ ಶಂಕೆ

BREAKING : ಬಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ; ಅವಶೇಷಗಳಡಿ ಕಾರ್ಮಿಕರು ಸಿಕ್ಕ ಶಂಕೆ

0

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಹಲವಾರು ಕಾರ್ಮಿಕರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಬಾರೀ ಮಳೆ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ತೊಡಕಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಮೊದಲ ಮಹಡಿಯವರೆಗೆ ನಿರ್ಮಿಸಿದ್ದಂತ ಕಟ್ಟದ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

You cannot copy content of this page

Exit mobile version