BREAKING : ಬಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ; ಅವಶೇಷಗಳಡಿ ಕಾರ್ಮಿಕರು ಸಿಕ್ಕ ಶಂಕೆ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಹಲವಾರು ಕಾರ್ಮಿಕರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಬಾರೀ ಮಳೆ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ತೊಡಕಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಮೊದಲ ಮಹಡಿಯವರೆಗೆ ನಿರ್ಮಿಸಿದ್ದಂತ ಕಟ್ಟದ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು