ಲಕ್ನೋ: ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಘಟಲ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾನುವಾರ ತಡರಾತ್ರಿ 2.15ರ ಸುಮಾರಿಗೆ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿರುವ 34ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಗೋಗಾಜಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 43 ಮಂದಿ ಗಾಯಗೊಂಡಿದ್ದಾರೆ. ಮృತರ ಪೈಕಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಮಗು ಸೇರಿದ್ದಾರೆ. ಅಪಘಾತದ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಬಲಿಪಶುಗಳು ಉತ್ತರ ಪ್ರದೇಶದ ಕಾಸ್‌ಗಂಜ್‌ನಿಂದ ರಾಜಸ್ಥಾನದ ಗೋಗಾಮೇಡಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ 43 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್‌ನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ. ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
https://x.com/ANI/status/1959780144517972351