Friday, June 20, 2025

ಸತ್ಯ | ನ್ಯಾಯ |ಧರ್ಮ

ಎಲೆಕ್ಟೋರಲ್ ಬಾಂಡ್ ಪ್ರಕರಣ: SBIವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ, ಮಾರ್ಚ್ 11ರಂದು ವಿಚಾರಣೆ

ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಎಲೆಕ್ಟೋರಲ್ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30 ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾಡಿದ ಮನವಿಯನ್ನು ಪ್ರಶ್ನಿಸಿ ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಎಲೆಕ್ಟೋರಲ್ ಬಾಂಡ್ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಎಡಿಆರ್ ಸುಪ್ರೀಂ ಕೋರ್ಟ್‌ನಲ್ಲಿ ನಿಂದನೆ ಅರ್ಜಿ ಸಲ್ಲಿಸಿದೆ. ಸಂಸ್ಥೆಯನ್ನು ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಇ-ಮೇಲ್ ಕಳುಹಿಸುವಂತೆ ಹೇಳಿದ ಸುಪ್ರೀಂ ಕೋರ್ಟ್ ಮಾರ್ಚ್ 11ರಂದು ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ಮಾಡುವುದಾಗಿ ಭರವಸೆ ನೀಡಿತು.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು ಪ್ರಕರಣದಲ್ಲಿ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಬಯಸಿರುವುದಾಗಿ ತಿಳಿಸಿದರು.

ಎಲೆಕ್ಟೋರಲ್ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ವಿಸ್ತರಣೆ ಕೋರಿ ಮಾರ್ಚ್ 4ರಂದು ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಕಳೆದ ತಿಂಗಳು ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ವಿವರಗಳನ್ನು ಸಲ್ಲಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು.

“ಈ ಗೌರವಾನ್ವಿತ ನ್ಯಾಯಾಲಯದ ಸಾಂವಿಧಾನಿಕ ಪೀಠ ನೀಡಿದ ತೀರ್ಪನ್ನು ಎಸ್‌ಬಿಐ ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದೆ ಮತ್ತು ಇದು ನಾಗರಿಕರ ಮಾಹಿತಿಯ ಹಕ್ಕನ್ನು ನಿರಾಕರಿಸುವುದಲ್ಲದೆ, ಈ ಗೌರವಾನ್ವಿತ ನ್ಯಾಯಾಲಯದ ಅಧಿಕಾರವನ್ನು ದುರ್ಬಲಗೊಳಿಸುತ್ತದೆ” ಎಂದು ಎಡಿಆರ್ ವಕೀಲರು ಪ್ರಕರಣದ ಕುರಿತು ವಾದಿಸುವಾಗ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page