Thursday, June 26, 2025

ಸತ್ಯ | ನ್ಯಾಯ |ಧರ್ಮ

ರಾಹುಲ್ ಗಾಂಧಿ ಬಗ್ಗೆ ತುಚ್ಛ ಹೇಳಿಕೆ ನೀಡಿದ ವಿವಾದಾತ್ಮಕ ನಟಿ, ಸಂಸದೆ ಕಂಗನಾ ರಾಣೌತ್

ವಿವಾದಾತ್ಮಕ ನಟಿ ಮತ್ತು ರಾಜಕಾರಣಿ ಎಂದೇ ಕುಖ್ಯಾತಿ ಪಡೆದ ಸಂಸದೆ ಕಂಗನಾ ರಣೌತ್ ಈಗ ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಾತ್ಮಕವಾಗಿ ಮಾತನಾಡಿದ ಕಂಗನಾ ರಣೌತ್ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಕಳೆದುಕೊಂಡ ಇದ್ದಾರೆ.

“ರಾಹುಲ್ ಗಾಂಧಿ ಕುಡಿದು, ಡ್ರಗ್ ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು” ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

 ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಂಗನಾ ರಣೌತ್ ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಹೇಳಿಕೆ ನೀಡಿದ್ದಾರೆ.

ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

‘ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ’ ಎಂದಿದ್ದಾರೆ.

ಈ ಹಿಂದೆ ದೇಶದ ರೈತರ ಬಗ್ಗೆಯೂ ವಿವಾದಾತ್ಮಕವಾದ ಹೇಳಿಕೆ ನೀಡಿದ್ದ ಕಂಗನಾ ರಣೌತ್, ಇದೇ ಕಾರಣಕ್ಕೆ ವಿಮಾನ ನಿಲ್ದಾಣದ ಸಿಬ್ಬಂದಿಯಿಂದ ಕಪಾಳಮೋಕ್ಷಕ್ಕೆ ಒಳಗಾಗಿದ್ದು, ದೇಶದಾದ್ಯಂತ ದೊಡ್ಡದಾಗಿ ಸುದ್ದಿಯಾಗಿತ್ತು. ಈಗ ಮತ್ತೊಮ್ಮೆ ಈ ರೀತಿಯ ವಿವಾದಿತ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ಧಿಗೆ ಬಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page