ಮಾರ್ಚ್ 3ರಂದು ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿದ್ದ ಕರ್ನಾಟಕ ಸರ್ಕಾರ ಈಗ ಮತ್ತೋರ್ವ ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ವರ್ಗಾವಣೆಗೊಳಿಸಿ ಆದೇಶವನ್ನು ಹೊರಡಿಸಿದೆ. ವಿಶೇಷ ಎಂದರೆ ತೀರಾ ಇತ್ತೀಚೆಗೆ ವರ್ತಿಕಾ ಕಟಿಯಾರ್ ಅವರು ರೂಪಾ ಅವರ ಮೇಲೆ ಅಧಿಕಾರ ದುರ್ಬಳಕೆ ವಿಚಾರವಾಗಿ ಗಂಭೀರ ಆರೋಪ ಮಾಡಿದ್ದರು.
ಡಿ. ರೂಪಾ ಆಂತರಿಕ ಭದ್ರತಾ ದಳ (ಐಎಸ್‌ಡಿ) ಐಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ವರ್ತಿಕಾ ಕಟಿಯಾರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದರು. ಇಬ್ಬರ ನಡುವಿನ ಜಟಾಪಟಿಯಲ್ಲಿ ಈಗ ರೂಪಾ ಮೌಡ್ಗಿಲ್ ಅವರನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.
ಬುಧವಾರ ಡಿ. ರೂಪಾ ವರ್ಗಾವಣೆ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ನಾಗಪ್ಪ ಎಸ್ ಪರೀತ್ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-4) ಆದೇಶ ಹೊರಡಿಸಿದ್ದಾರೆ.
ಡಿ. ರೂಪಾ ಆಂತರಿಕ ಭದ್ರತಾ ದಳ (ಐಎಸ್‌ಡಿ) ಐಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ವರ್ತಿಕಾ ಕಟಿಯಾರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದರು. ಈ ಇಬ್ಬರು ಅಧಿಕಾರಿಗಳ ನಡುವಿನ ಜಟಾಪಟಿ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಈ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಕದನ ಇಡೀ ರಾಜ್ಯದಲ್ಲೇ ದೊಡ್ಡ ಸುದ್ದಿಯಾಗಿತ್ತು. ಆ ನಂತರ ಸರ್ಕಾರ ರೂಪಾ ಅವರನ್ನು ಯಾವುದೇ ಹುದ್ದೆ ನೀಡದೇ ತಾವಿದ್ದ ಆಂತರಿಕ ಭದ್ರತಾ ವಿಭಾಗದ ಐಜಿಪಿ ಹುದ್ದೆಯಿಂದ ವಜಾಗೊಳಿಸಿ ವರ್ಗಾವಣೆ ಮಾಡಿತ್ತು. ಈಗ ಮತ್ತೊಮ್ಮೆ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನಡುವಿನ ಜಟಾಪಟಿ ಪರಿಣಾಮ ರೂಪಾ ಅವರಿಗೆ ವರ್ಗಾವಣೆ ಬಿಸಿ ತಟ್ಟಿದೆ.