Friday, November 1, 2024

ಸತ್ಯ | ನ್ಯಾಯ |ಧರ್ಮ

ಸಿಪಿ ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ವಿಡಿಯೋ, ಸುದ್ದಿಗಳಿಗೆ ಕೋರ್ಟ್ ನಿರ್ಬಂಧ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಅಭ್ಯರ್ಥಿಗಳು ಹಬ್ಬ ಅನ್ನೋದನ್ನೂ ಮರೆತು ಮತ ಬೇಟೆಯಲ್ಲಿ ತೊಡಗಿದ್ದಾರೆ. ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ.

ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ ಎಲ್ಲಾ ಸುದ್ದಿವಾಹಿನಿಗಳು, ವೆಬ್ ಸೈಟ್ ಚಾನಲ್ ಗಳು, ಯೂಟ್ಯೂಬ್ ವಾಹಿನಿಗಳಲ್ಲವುಗಳಿಗೂ ಸ್ಪಷ್ಟ ಆದೇಶ ನೀಡಲಾಗಿದೆ.

ಅಷ್ಟೇ ಅಲ್ಲದೆ, ಈ ಹಿಂದೆ ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಪ್ರಸಾರವಾಗಿದ್ದ ವಿಡಿಯೋಗಳನ್ನು ಸ್ಥಗಿತಗೊಳಿಸುವಂತೆ ಸಾಮಾಜಿಕ ಜಾಲತಾಣಗಳು, ಒಳಗೊಂಡಂತೆ ಎಲ್ಲಾ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಕೋರ್ಟ್ ನಿಂದ ಮುಂದಿನ ಆದೇಶ ಬರುವ ವರೆಗೂ ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ವಿಡಿಯೋ ಪ್ರಸಾರ ಮಾಡಬಾರದು ಎಂದು ನ್ಯಾಯಪೀಠ ಆದೇಶಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page