ಅಕ್ರಮ ಗಣಿಗಾರಿಕೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ವಿಧಿಸಿದ್ದ ನಿರ್ಬಂಧಕ್ಕೆ ಇಂದು ಮುಕ್ತಿ ಸಿಕ್ಕಿದೆ. ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಹಲವು ಬಾರಿ ಕೋರ್ಟ್ ಅವಕಾಶ ಕೇಳಿ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿತ್ತು. ಆದರೆ ಇದೀಗ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಈ ಮೂಲಕ ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.