Home ರಾಜಕೀಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

0

ದೆಹಲಿಯ ಮದ್ಯ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ರೌಸ್ ಅವೆನ್ಯೂ ನ್ಯಾಯಾಲಯವು ಇದೇ ತಿಂಗಳ 20ರವರೆಗೆ ವಿಸ್ತರಿಸಿದೆ.

ಗುರುವಾರ ಈ ಕುರಿತು ನ್ಯಾಯಾಲಯ ಆದೇಶ ಹೊರಡಿಸಿದೆ. ಕಸ್ಟಡಿ ಅವಧಿ ಮುಗಿದ ಕಾರಣ, ಸಿಬಿಐ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿತ್ತು.

ಸೂಕ್ತ ಕಾರಣವಿಲ್ಲದೆ ಕೇಜ್ರಿವಾಲ್ ಬಂಧನವಾಗಿದೆ ಎಂದು ಹೇಳಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಇಡಿ ಕಾಲಾವಕಾಶ ಕೋರಿದೆ.

ಜಾಮೀನು ರದ್ದಾದರೆ ಮತ್ತೆ ಕೇಜ್ರಿವಾಲ್ ಬಂಧನವಾಗುತ್ತಾ? ಎಂದು ಇಡಿಯನ್ನು ಹೈಕೋರ್ಟ್ ಪ್ರಶ್ನಿಸಿದೆ. ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಇಡಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತಾದರೂ ಸದ್ಯ ಸಿಬಿಐ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

You cannot copy content of this page

Exit mobile version