Saturday, September 28, 2024

ಸತ್ಯ | ನ್ಯಾಯ |ಧರ್ಮ

ಚುನಾವಣಾ ಬಾಂಡ್ ಅಕ್ರಮ : ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ FIR ದಾಖಲಿಸಲು ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್ ಮೂಲಕ ರಾಷ್ಟ್ರೀಯ ಅಂತರರಾಷ್ಟ್ರೀಯ, ಒಂದಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕಾರ್ಯ ನಿರ್ವಹಿಸುವ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ FIR ದಾಖಲಿಸಲು ಆದೇಶಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ.

ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ತ್​ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು (PCR) ದಾಖಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ FIR ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶ ಮಾಡಿದೆ. ಅಲ್ಲದೇ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್​ ಮುಂದೂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page