ಲೈಂಗಿಕ ದೌರ್ಜನ್ಯ, ಕಿಡ್ನಾಪ್ ಹಾಗೂ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ನಾಲ್ಕನೇ ಪ್ರಕರಣದಲ್ಲಿ ತಮ್ಮ ವಶಕ್ಕೆ ಪಡೆದಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ಹಾಜರು ಪಡಿಸಿದರು.
ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜುಲೈ.8ರವಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.