Tuesday, April 22, 2025

ಸತ್ಯ | ನ್ಯಾಯ |ಧರ್ಮ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಕೋರ್ಟ್‌ ಆದೇಶ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಗ್‌ ಶಾಕ್‌ ನೀಡಿದೆ.

ಹೌದು.. ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ (ಕ್ರೈಂ ನಂ.20 ) ತಮ್ಮನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ನಡೆಸಿದ್ದಾರೆ.

ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಪ್ರಕರಣದಲ್ಲಿ ಕೈಬಿಡುವಂತೆ ಮಾಜಿ ಸಂಸದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page