Monday, July 28, 2025

ಸತ್ಯ | ನ್ಯಾಯ |ಧರ್ಮ

ಯಡಿಯೂರಪ್ಪ ಪೋಕ್ಸೋ ಪ್ರಕರಣ ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶ

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ತಮಗೆ ​​​​​ವಿಧಿಸಿದ್ದ ಷರತ್ತು ಸಲಿಡಿಕೆ ಕೋರಿ ಹೈಕೋರ್ಟ್​​ಗೆ ಇಂದು ಅರ್ಜಿ ಸಲ್ಲಿಸಿದ್ದಾರೆ.ಈ ಕುರಿತ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ಪ್ರಕರಣ ಸಂಬಂಧದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳಕೂಡದು ಎಂದು  ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಈ ಷರತ್ತುಗಳನ್ನು ಸಡಿಲು ಮಾಡುವಂತೆ ಕೋರಿ ಬಿಎಸ್​​ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಈಗಾಗಲೇ ಯಡಿಯೂರಪ್ಪ ಅವರು ಕೋರ್ಟ್ ಷರತ್ತು ಉಲ್ಲಂಘನೆ ಮಾಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆಯದೇ ವ್ಯಾಪ್ತಿ ಬಿಟ್ಟು ಪ್ರಯಾಣಿಸಿದ್ದಾರೆ ಎಂದು ಎಸ್​​ಪಿಪಿ ಅಶೋಕ್​​ ನಾಯಕ್ ಅವರು ಪೀಠದ ಗಮನಕ್ಕೆ ತಂದರು. ಅಲ್ಲದೇ ಯಡಿಯೂರಪ್ಪ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್​​ಪಿಪಿ ಕಾಲಾವಕಾಶ ಕೋರಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಕೋರ್ಟ್ ಮುಂದೂಡಿ ಆದೇಶ ಹೊರಡಿಸಿದೆ.ಸಹಾಯಕೋರಿ ಮನೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಯಡಿಯೂರಪ್ಪ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದಡಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು. ನಂತರದ ದಿನಗಳಲ್ಲಿ ಅನಾರೋಗ್ಯದ ಕಾರಣದಿಂದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page