Home ಬೆಂಗಳೂರು ಪ್ರೀತಂ ಗೌಡ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ – ತನಿಖೆಗೆ ಕೋರ್ಟ್ ಆದೇಶ

ಪ್ರೀತಂ ಗೌಡ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ – ತನಿಖೆಗೆ ಕೋರ್ಟ್ ಆದೇಶ

ಬೆಂಗಳೂರು : ಶಾಸಕರಾಗಿದ್ದ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಅವರಿಗೆ ಕೋರ್ಟ್ ಶಾಕ್ ನೀಡಿದೆ. ಪ್ರೀತಂ ಗೌಡ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

2018 ಹಾಗೂ 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣಪತ್ರಗಳನ್ನು ಉಲ್ಲೇಖಿಸಿ, ಪ್ರೀತಂ ಗೌಡ ಅವರ ಕುಟುಂಬದ ಆಸ್ತಿಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿ ಸಂದೀಪ್ ಬಿ.ಪಿ. ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಖಾಸಗಿ ದೂರಿನ ವಿಚಾರಣೆಯನ್ನು ಇಂದು (ಆಗಸ್ಟ್ 19) ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಡೆಸಿತು. ವಿಚಾರಣೆ ಬಳಿಕ ಪ್ರೀತಂ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹಾಸನ ಲೋಕಾಯುಕ್ತ ಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದೆ. ಅಲ್ಲದೆ, ತನಿಖೆ ಪೂರ್ಣಗೊಳಿಸಿ ತನಿಖಾ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ.

2018 ಮತ್ತು 2023ರ ಚುನಾವಣಾ ಪ್ರಮಾಣಪತ್ರಗಳಲ್ಲಿ ನಮೂದಿಸಿರುವ ಆಸ್ತಿ ವಿವರಗಳನ್ನು ಆಧಾರವಾಗಿಟ್ಟುಕೊಂಡು ದೂರುದಾರರು ಮಾಡಿರುವ ಆರೋಪಗಳ ಕುರಿತು ಇದೀಗ ಲೋಕಾಯುಕ್ತ ತನಿಖೆ ನಡೆಯಲಿದೆ.

You cannot copy content of this page

Exit mobile version