ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತವರ ಸಹಚರರಿಗೆ ಸಧ್ಯಕ್ಕೆ ಜೈಲಿನಿಂದ ಬಿಡುಗಡೆ ಇಲ್ಲವಾಗಿದೆ. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಅವರಿಗೆ ಈಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಪ್ರಕರಣ ಸಂಬಂಧ ದರ್ಶನ್ ಮತ್ತು ಅವರ ಸಹಚರರು ಜಾಮೀನಿಗೆ ಕೋರಿದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು, ನಟ ದರ್ಶನ್ ಮತ್ತು ತಂಡಕ್ಕೆ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್.28ರವರೆಗೆ ವಿಸ್ತರಿಸಿ ಆದೇಶಿಸಿದೆ.
ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ನಟ ದರ್ಶನ್ ಜೈಲೂಟ ಬೇಡ, ಮನೆಯೂಟ ಬೇಕು ಅಂತ ಅರ್ಜಿ ಸಲ್ಲಿಸಿದ್ದರೂ ಸಹ ಕೋರ್ಟ್ ಅವಕಾಶ ನೀಡಿರಲಿಲ್ಲ. ಈಗ ಮತ್ತೊಮ್ಮೆ ಜಾಮೀನಿಗೆ ಸಲ್ಲಿಸಿರುವ ಅರ್ಜಿಯನ್ನೂ ತಿರಸ್ಕರಿಸಿದೆ.