Tuesday, April 29, 2025

ಸತ್ಯ | ನ್ಯಾಯ |ಧರ್ಮ

ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣ; ವಕೀಲರ ಬದಲಾವಣೆ ಬೇಡಿಕೆ ನಿರಾಕರಿಸಿದ ಕೋರ್ಟ್

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ಆರೋಪಿಗಳ ಪಾಲಿಗೆ ಮತ್ತಷ್ಟು ಜಟಿಲವಾಗುತ್ತಿದೆ. ಈ ನಡುವೆ ಆರೋಪಿಗಳು ಪಾಲಿಗೆ ಈ ಪ್ರಕರಣ ಮತ್ತಷ್ಟು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಕೋರ್ಟ್ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ.

ಸಧ್ಯ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ವಕಾಲತ್ತು ವಹಿಸಿದ್ದ ವಕೀಲ ಜಿ ಅರುಣ್ ವಕಾಲತ್ತಿನಿಂದ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ, ಇವರ ಪರವಾಗಿ ವಕಾಲತ್ತು ನಡೆಸಲು ಹೊಸ ವಕೀಲರಿಗೆ ತಲಾಶ್ ಮುಂದಾಗಿದ್ದಾರೆ. ಇದಕ್ಕೆ ಕೋರ್ಟಿನ ಅನುಮತಿಗಾಗಿ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಭವಾನಿ ರೇವಣ್ಣ ಕೋರ್ಟ್ ಮುಂದೆ ತಮ್ಮ ಅಹವಾಲು ನೀಡಿದ್ದಾರೆ.

ಹೀಗಾಗಿ ಹೊಸ ವಕೀಲರ ನೇಮಕ ಮಾಡಿಕೊಳ್ಳಲು ಕಾಲಾವಕಾಶ ನೀಡುವಂತೆ ಪ್ರಜ್ವಲ್‌ ರೇವಣ್ಣ ಮತ್ತು ಭವಾನಿ ರೇವಣ್ಣ ಮನವಿ ಮಾಡಿದರು. ಆದರೆ, ನ್ಯಾಯಾಲಯ ಸಮಯಾವಕಾಶ ನೀಡಲು ನಿರಾಕರಿಸಿತು. ಮಂಗಳವಾರದ ವೇಳೆಗೆ ನೇಮಕ ಮಾಡಿಕೊಳ್ಳಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.

ಮೇ 2ರವರೆಗೆ ಸಮಯ ನೀಡುವಂತೆ ಕೇಳಿದ ಪ್ರಜ್ವಲ್‌ ರೇವಣ್ಣ, ನಮ್ಮ ತಾಯಿಯವರು ವಕೀಲರ ನೇಮಿಸಲು ಯತ್ನಿಸುತ್ತಿದ್ದಾರೆ ಎಂದು ಮನವಿ ಮಾಡಿದರು. ಆಗ ಮತ್ತೊಮ್ಮೆ ಭವಾನಿ ರೇವಣ್ಣ ಮನವಿಗೆ ಮುಂದಾದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿ, ಪ್ರಕರಣಕ್ಕೂ, ನಿಮಗೂ ಸಂಬಂಧ ಇಲ್ಲ. ನ್ಯಾಯಾಲಯದಲ್ಲಿ ಮಾತನಾಡದಂತೆ ಸೂಚನೆ ನೀಡಿದಾಗ ಭವಾನಿ ರೇವಣ್ಣ ಅವರು ಕಣ್ಣೀರು ಹಾಕುತ್ತಾ ನ್ಯಾಯಾಲಯದ ಹಾಲ್‌ನಿಂದ ಹೊರ ನಡೆದರು.

ಜನವರಿಯಿಂದ ಪದೇ ಪದೇ ಮುಂದೂಡಿಕೆ ಪಡೆಯಲಾಗುತ್ತಿದೆ. ವಿಚಾರಣೆ ನಿಗದಿ ಮಾಡಲು ಈಗಾಗಲೇ ಮೂರು ಬಾರಿ ಸಮಯ ಪಡೆಯಲಾಗಿದೆ. ಒಂದು ವೇಳೆ ಆರೋಪಿ ವಕೀಲರ ನೇಮಿಸಿಕೊಳ್ಳದಿದ್ದರೆ ಅಮಿಕಸ್ ಕ್ಯೂರಿ ನೇಮಿಸಲಾಗುವುದು. ಒಂದು ದಿನ ಸಮಯ ನೀಡಲಾಗುತ್ತದೆ, ಅದಕ್ಕಿಂತ ಹೆಚ್ಚಿನ ಸಮಯ ನೀಡಲಾಗದು ಎಂದು ನ್ಯಾಯಾಲಯ ತಿಳಿಸಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page