ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಗಿದಿದ್ದು ಈಗ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಕೇಸ್ ರದ್ದು ಕೋರಿ ಸಲ್ಲಿಸಲಾಗಿದ್ದಂತ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅವರಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಿತ್ತು.
ಇದೀಗ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಸಂತ್ರಸ್ತೆಯ ಸಹೋದರ ಪ್ರಶ್ನಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸುವಂತೆ, ಹೆಚ್ಚಿನ ತನಿಖೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿರುವಂತ ಹೈಕೋರ್ಟ್, ವಿಚಾರಣೆ ಪೂರ್ಣಗೊಳಿಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ.