Wednesday, September 24, 2025

ಸತ್ಯ | ನ್ಯಾಯ |ಧರ್ಮ

ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಅಗತ್ಯ ಎಂದ ನ್ಯಾಯಾಲಯ: ‘X’ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅನಿವಾರ್ಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಘನತೆಯನ್ನು ಕಾಪಾಡುವ ದೃಷ್ಟಿಯಿಂದ ಇದು ಅಗತ್ಯ ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್, ಟ್ವೀಟ್‌ಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶಗಳನ್ನು ಪ್ರಶ್ನಿಸಿ ‘ಎಕ್ಸ್’ (X) ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 79(3)(b) ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಈ ಅಧಿಕಾರವಿದೆ ಎಂದು ಪುನರುಚ್ಚರಿಸಿತು. ತನ್ನ ವಿರುದ್ಧ ಯಾವುದೇ ಬಲವಂತದ ಅಥವಾ ಪೂರ್ವಾಗ್ರಹ ಪೀಡಿತ ಕ್ರಮ ತೆಗೆದುಕೊಳ್ಳದಂತೆ ತಡೆಯಲು ಎಕ್ಸ್ ಕಾರ್ಪೊರೇಷನ್ ನ್ಯಾಯಾಲಯವನ್ನು ಕೋರಿತ್ತು. ಆದರೆ, ಘನತೆಯ ಹಕ್ಕನ್ನು ಹಳಿತಪ್ಪಿಸಲು ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸದಿದ್ದರೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಪ್ರಕಾರ, ಮಾಹಿತಿ ಮತ್ತು ಅದರ ಪ್ರಸಾರವನ್ನು ನಿಯಂತ್ರಿಸದೆ ಬಿಟ್ಟಿಲ್ಲ. ತಂತ್ರಜ್ಞಾನ ಎಷ್ಟೇ ಬೆಳೆದರೂ, ಜಾಗತಿಕವಾಗಿ ಮತ್ತು ಸ್ಥಳೀಯವಾಗಿ ಆಡಳಿತಗಳು ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿವೆ. ಇದು ಈಗಿನ ಕಾಲದ ಅಗತ್ಯವೂ ಹೌದು. ಈ ಹಿನ್ನೆಲೆಯಲ್ಲಿ, ಸೈಬರ್ ಅಪರಾಧಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ‘ಸಹಯೋಗ್’ ಪೋರ್ಟಲ್ ದೇಶದ ನಾಗರಿಕರು ಮತ್ತು ಟ್ವಿಟರ್ (ಎಕ್ಸ್) ನಡುವೆ ಭರವಸೆಯ ಸೇತುವಾಗಿ ಕೆಲಸ ಮಾಡಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎಕ್ಸ್ ಸಂಸ್ಥೆ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಅವಕಾಶವಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page