ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರಿಗೆ ಚಂಡೀಗಢ ಕೋರ್ಟ್ ನೋಟಿಸ್ ನೀಡಿದೆ. ತನಿಖೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಮಂಗಳವಾರ, ಕಂಗನಾ ಅವರ ಹೊಸ ಚಿತ್ರ ಎಮರ್ಜೆನ್ಸಿ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.
ಈ ಸಂದರ್ಭ ನೋಟಿಸ್ ಜಾರಿ ಮಾಡಲಾಗಿದೆ. ಡಿಸೆಂಬರ್ 5ರಂದು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಎಫ್‌ಐಆರ್ ದಾಖಲಿಸುವಂತೆ ಚಂಡೀಗಢ ಎಸ್‌ಎಸ್‌ಪಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಕಂಗನಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ಕಂಗನಾ ರಣಾವತ್ ಅವರ ಹೊಸ ಚಿತ್ರ ಎಮರ್ಜೆನ್ಸಿ ಸೆಪ್ಟೆಂಬರ್ 6ರಂದು ಬಿಡುಗಡೆಯಾಗಬೇಕಿತ್ತು. ಆದರೆ ಅದು ನಿಷೇಧವನ್ನು ಎದುರಿಸುತ್ತಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನಾಧಾರಿತ ಚಿತ್ರ ವಾಗಿದ್ದು, ಈಗಾಗಲೇ ಟ್ರೈಲರ್ ಬಿಡುಗಡೆಯಾಗಿದೆ. ಕಂಗನಾ ಸಿನಿಮಾದ ಮೂಲಕ ಸಿಖ್ಖರ ಘನತೆಯನ್ನು ಕೆಡಿಸಲು ಯತ್ನಿಸಿದ್ದಾರೆ ಎಂದು ವಕೀಲ ರವೀಂದರ್ ಸಿಂಗ್ ಬಸ್ಸಿ ಆರೋಪಿಸಿದ್ದಾರೆ.
ಕಂಗನಾ ಅವರು ಇತಿಹಾಸವನ್ನು ಓದದೆ ಸಿಖ್ಖರನ್ನು ಋಣಾತ್ಮಕವಾಗಿ ಚಿತ್ರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡಿ ಸಂಸದರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಕಂಗನಾ ಜೊತೆಗೆ ಚಿತ್ರಕಥೆಗಾರ ರಿತೇಶ್ ಶಾ ಮತ್ತು ಝೀ ಸ್ಟುಡಿಯೋಸ್ ಕೂಡ ಅರ್ಜಿಯಲ್ಲಿ ಪ್ರತಿವಾದಿಗಳಾಗಿ ಸೇರ್ಪಡೆಗೊಂಡಿದ್ದಾರೆ.
ಏತನ್ಮಧ್ಯೆ, ಮೊಹಾಲಿಯ ಗುರಿಂದರ್ ಸಿಂಗ್ ಮತ್ತು ಗುರ್ಮೋಹನ್ ಸಿಂಗ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಎಮರ್ಜೆನ್ಸಿ ಚಿತ್ರದ ಬಿಡುಗಡೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ. ಚಿತ್ರದಲ್ಲಿ ಸಿಖ್ಖರನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿದೆ.
ಹಾಗೇನಾದರೂ ಚಿತ್ರ ಬಿಡುಗಡೆಯಾದರೆ ಸಿಖ್ಖರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಹೇಳಲಾಗಿದೆ. ತಜ್ಞರ ಸಮಿತಿ ರಚಿಸಿ ಅದರಲ್ಲಿ ಎಸ್‌ಜಿಪಿಸಿ ಸದಸ್ಯರಿಗೆ ಸ್ಥಾನ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನ ತಮಗೆ ಚಿತ್ರ ಪ್ರದರ್ಶಿಸಿ, ವಿವಾದಾತ್ಮಕ ದೃಶ್ಯಗಳನ್ನು ತೆಗೆದು ನಂತರ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.