ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಮುಖಂಡ ಶಾನವಾಜ್ ಹುಸೇನ್ ಅವರಿಗೆ ಸಮನ್ಸ್

20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಕೋರ್ಟ್ ಆದೇಶ

ಹೊಸದೆಹಲಿ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಹುಸೇನ್ ಇದೇ ತಿಂಗಳ 20ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದ್ದಾರೆ. ಏಪ್ರಿಲ್ 2018ರಲ್ಲಿ, ಹುಸೇನ್ ತನ್ನನ್ನು ಫಾರ್ಮ್‌ಹೌಸ್‌ಗೆ ಕರೆದೊಯ್ದು ತಂಪು ಪಾನೀಯದಲ್ಲಿ ಮದ್ದು ನೀಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಈ ಕುರಿತು ಎಫ್‌ಐಆರ್ ದಾಖಲಿಸುವಂತೆ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ಸೂಚಿಸಿದ್ದರು. ನಂತರ ಶಹನವಾಜ್ ಹುಸೇನ್ ಈ ಆದೇಶವನ್ನು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಹೈಕೋರ್ಟ್ ಹುಸೇನ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪೊಲೀಸರ ವರದಿಯನ್ನು ತಳ್ಳಿಹಾಕಿದ್ದಾರೆ. ತನಿಖೆಯ ಸಮಯದಲ್ಲಿ ಮಹಿಳೆಯ ಆರೋಪಗಳ ವಿಶ್ವಾಸಾರ್ಹತೆಯನ್ನು ಪರೀಕ್ಷಿಸಬಹುದು ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು